2 Chronicles 29:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಎಲ್ಲಾ ಯಾಜಕರನ್ನೂ ಲೇವಿಯರನ್ನೂ ಕರೆದು ದೇವಾಲಯದ ಪೂರ್ವದಿಕ್ಕಿನಲ್ಲಿದ್ದ ಅಂಗಳದಲ್ಲಿ ಒಟ್ಟುಗೂಡಿಸಿ ಅವರಿಗೆ, “ನನ್ನ ಮಾತುಗಳನ್ನು ಕೇಳಿರಿ. ಲೇವಿಯರೇ, ನೀವು ನಿಮ್ಮನ್ನು ಪವಿತ್ರ ಸೇವೆಗೆ ಸಿದ್ಧಮಾಡಿಕೊಳ್ಳಿರಿ. ಯೆಹೋವ ದೇವರ ಆಲಯವನ್ನು ಪವಿತ್ರ ಸೇವೆಗಾಗಿ ಶುದ್ಧಮಾಡಿರಿ. ನಮ್ಮ ಪೂರ್ವಿಕರು ಸೇವೆಮಾಡಿದ ದೇವರು ಆತನೇ. ದೇವಾಲಯದೊಳಗೆ ಇರಬಾರದ ವಸ್ತುಗಳನ್ನು ತೆಗೆದು ಹೊರಗೆಹಾಕಿರಿ. ಅವು ದೇವರ ಆಲಯವನ್ನು ಹೊಲಸು ಮಾಡುತ್ತವೆ. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯಾಜಕರನ್ನೂ ಮತ್ತು ಲೇವಿಯರನ್ನೂ ದೇವಾಲಯದ ಮೂಡಣದಿಕ್ಕಿನ ಬಯಲಿನಲ್ಲಿ ಸೇರಿಸಿ
Kannada BSI Bible 2016
ಇದಲ್ಲದೆ ಅವನು ಯಾಜಕರನ್ನೂ ಲೇವಿಯರನ್ನೂ ಕರೆಕಳುಹಿಸಿ ಅವರನ್ನು ಮೂಡಣ ಬೀದಿಯಲ್ಲಿ ಕೂಡಿಸಿ ಕೊಂಡು ಅವರಿಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ -
Kannada Bible (KNCL) BSI 2016
ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,