2 Chronicles 29:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.
Kannada BSI Bible 2016
ನಮ್ಮ ಪಿತೃಗಳು ಅಪರಾಧಮಾಡಿ ನಮ್ಮ ದೇವರಾದ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ ಆತನನ್ನು ಬಿಟ್ಟು ಕರ್ತನ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.
Kannada Bible (KNCL) BSI 2016
ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.