2 Chronicles 29:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೋವನು ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಬಹು ಕೋಪಗೊಂಡು ಅವರನ್ನು ಶಿಕ್ಷಿಸಿದನು. ಯೆಹೋವನು ಯೆಹೂದ ಮತ್ತು ಜೆರುಸಲೇಮಿನ ಜನರಿಗೆ ಮಾಡಿದ್ದ ಸಂಗತಿಗಳನ್ನು ನೋಡಿದ ಅನ್ಯರು ಗೇಲಿ ಮಾಡುತ್ತ ವೈರತ್ವದಿಂದ ತಲೆಯಾಡಿಸಿದರು. ಇವೆಲ್ಲಾ ಸತ್ಯವೆಂದು ನಿಮಗೆ ತಿಳಿದದೆ. ಇದನ್ನು ನಿಮ್ಮ ಸ್ವಂತ ಕಣ್ಣುಗಳಿಂದ ನೋಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
Kannada BSI Bible 2016
ಆದದರಿಂದ ಯೆಹೂದದ ಮೇಲೆ ಯೂ ಮತ್ತು ಯೆರೂಸಲೇಮಿನವರ ಮೇಲೆಯೂ ಕರ್ತನ ರೌದ್ರವಾಯಿತು; ನೀವು ನಿಮ್ಮ ಕಣ್ಣುಗಳಿಂದ ನೋಡುವ ಹಾಗೆ ಆತನು ಅವರನ್ನು ಕಳವಳಕ್ಕೂ ವಿಸ್ಮಯಕ್ಕೂ ಅಪಹಾಸ್ಯಕ್ಕೂ ಒಪ್ಪಿಸಿಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇವಿುನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.
Kannada Bible (KNCL) BSI 2016
ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.