2 Chronicles 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ ಎರಡನೆಯ ಕೆರೂಬಿಯ ಇನ್ನೊಂದು ರೆಕ್ಕೆಯು ಮತ್ತೊಂದು ಗೋಡೆಗೆ ತಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ ತಗಲುತ್ತಿತ್ತು.; ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.
Kannada BSI Bible 2016
ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆಯೇ ಎರಡನೆಯ ಕೆರೂಬಿಯ ಐದು ಮೊಳ ಉದ್ದವಾದ ಒಂದು ರೆಕ್ಕೆಯು ಮನೆಯ ಗೋಡೆಗೂ ಇನ್ನೊಂದು ರೆಕ್ಕೆಯು ಮೊದಲನೆಯ ಕೆರೂಬಿಯ ರೆಕ್ಕೆಗೂ ತಗುಲಿದ್ದವು.
Kannada Bible (KNCL) BSI 2016
ಅದರಂತೆಯೇ ಎರಡನೆಯ ಕೆರೂಬಿಯ 2:2 ಮೀಟರ್ ಉದ್ದವಾದ ಒಂದು ರೆಕ್ಕೆ ಮನೆಯ ಗೋಡೆಗೂ ಇನ್ನೊಂದು ರೆಕ್ಕೆ ಮೊದಲನೆಯ ಕೆರೂಬಿಯ ರೆಕ್ಕೆಗೂ ತಗಲುತ್ತಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು.