2 Chronicles 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಕೊರಳಿನ ಸರಗಳನ್ನು ಮಾಡಿಸಿ ಅವುಗಳನ್ನು ಕಂಬಗಳ ಮೇಲ್ಭಾಗದಲ್ಲಿ ಸಿಕ್ಕಿಸಿದನು. ಅವನು ನೂರು ದಾಳಿಂಬೆ ಹಣ್ಣುಗಳನ್ನು ಮಾಡಿಸಿ ತೂಗುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಗರ್ಭಗೃಹದ ಸರಪಣಿಗಳಂತೆ ಹಾರಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕೆತ್ತಿಸಿ ಕಟ್ಟಿಸಿದನು.
Kannada BSI Bible 2016
ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಗರ್ಭಗೃಹದ ಸರಪಣಿಯಂತೆ ಸರಪಣಿಗಳನ್ನು ಮಾಡಿಸಿ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬಹಣ್ಣುಗಳನ್ನು ಕಟ್ಟಿಸಿದನು.
Kannada Bible (KNCL) BSI 2016
ಗರ್ಭಗುಡಿಯ ಸರಪಣಿಯಂಥ ಸರಪಣಿಗಳನ್ನು ಮಾಡಿಸಿ, ಆ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ, ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕಟ್ಟಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.