2 Chronicles 3:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಂಬಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ ಯಾಕೀನ್ ಎಂತಲೂ ಎಡಗಡೆಯ ಕಂಬಕ್ಕೆ ಬೋವಜ್ ಎಂತಲೂ ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತಂಭಗಳನ್ನು ದೇವಾಲಯದ ಮುಂಭಾಗದಲ್ಲಿ, ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿದನು. ಬಲಗಡೆಯ ಕಂಬಕ್ಕೆ “ಯಾಕೀನ್” ಎಂದೂ ಎಡಗಡೆಯಿದ್ದ ಕಂಬಕ್ಕೆ “ಬೋವಜ್” ಎಂದೂ ಹೆಸರಿಟ್ಟನು.
Kannada BSI Bible 2016
ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಂಬಗಳನ್ನು ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ ಬಲಗಡೆಯದಕ್ಕೆ ಯಾಕೀನ್ ಎಂದೂ ಎಡಗಡೆಯದಕ್ಕೆ ಬೋವಜ್ ಎಂದೂ ಹೆಸರಿಟ್ಟನು.
Kannada Bible (KNCL) BSI 2016
ಆ ಕಂಬಗಳನ್ನು, ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ, ಬಲಗಡೆಯದಕ್ಕೆ ‘ಯಾಕೀನ್’ ಎಂದೂ ಎಡಗಡೆಯದಕ್ಕೆ ‘ಬೋವಜ್’ ಎಂದೂ ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.