2 Chronicles 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವಾಲಯದ ಮುಂದುಗಡೆಯಿದ್ದ ಮಂಟಪವು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಎತ್ತರವಿತ್ತು. ಮಂಟಪದ ಒಳಮೈಯನ್ನು ಸೊಲೊಮೋನನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.
Kannada BSI Bible 2016
ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಗಲವು ಇಪ್ಪತ್ತು ಮೊಳ, ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ. ಸೊಲೊಮೋನನು ಅದರ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.
Kannada Bible (KNCL) BSI 2016
ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.