2 Chronicles 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದ ಮುಚ್ಚಿ, ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಆದರ ಹಲಗೆಗಳ ಮೇಲೆ ಖರ್ಜೂರದ ಮರಗಳನ್ನೂ ಬಳ್ಳಿಗಳನ್ನೂ ಸರಪಣಿಗಳನ್ನು ಕೆತ್ತಿಸಿದನು.
Kannada BSI Bible 2016
ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಿಗೆಗಳಿಂದಲೂ ಆ ಹಲಿಗೆಗಳನ್ನು ತೋರಣ ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕಬಂಗಾರದ ತಗಡಿನಿಂದಲೂ ಹೊದಿಸಿ
Kannada Bible (KNCL) BSI 2016
ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.