2 Chronicles 30:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕ ಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
Kannada BSI Bible 2016
ಆಗ ಅವರು ಇಸ್ರಾಯೇಲಿನ ದೇವರಾದ ಕರ್ತನ ಪಸ್ಕವನ್ನು ಆಚರಿಸಲು ಯೆರೂ ಸಲೇಮಿನಲ್ಲಿ ಕರ್ತನ ಆಲಯಕ್ಕೆ ಬರುವ ಹಾಗೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ, ಎಫ್ರಾಯಾಮ್ಯರಿಗೂ ಮನಸ್ಸೆಯ ವರಿಗೂ ಪತ್ರಗಳನ್ನು ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು.
Kannada Bible (KNCL) BSI 2016
ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.