2 Chronicles 30:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
Kannada BSI Bible 2016
ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
Kannada Bible (KNCL) BSI 2016
ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.