2 Chronicles 30:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
Kannada BSI Bible 2016
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ತೆಗೆದುಹಾಕಿದರು ಮತ್ತು ಧೂಪಪೀಠಗಳನ್ನೆಲ್ಲಾ ತೆಗೆದು ಬಿಟ್ಟು ಕಿದ್ರೋನ್ ಹಳ್ಳದಲ್ಲಿ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು.
Kannada Bible (KNCL) BSI 2016
ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.