2 Chronicles 30:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ದರು. ಯಾಜಕರೂ ಲೇವಿಯರೂ ನಾಚಿಕೆಯಿಂದ ತಮ್ಮನ್ನು ಸೇವೆಗಾಗಿ ಸಿದ್ಧಪಡಿಸಿಕೊಂಡು ಸರ್ವಾಂಗಹೋಮಕ್ಕಾಗಿ ಕಾಣಿಕೆಗಳನ್ನು ಯೆಹೋವನ ಮಂದಿರಕ್ಕೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂತರ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ಕೊಯ್ದರು.ಆಗ ಯಾಜಕರೂ, ಲೇವಿಯರೂ ನಾಚಿಕೆಪಟ್ಟು, ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನ ಸಮರ್ಪಿಸಿದರು.
Kannada BSI Bible 2016
ಎರಡನೇ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಪಸ್ಕ ವನ್ನು ವಧಿಸಿದರು. ಯಾಜಕರೂ ಲೇವಿಯರೂ ಲಜ್ಜೆ ಯನ್ನು ಹೊಂದಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ಮನೆಯೊಳಗೆ ದಹನಬಲಿಗಳನ್ನು ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ [ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ] ನಾಚಿಕೆಪಟ್ಟು ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ
Kannada Bible (KNCL) BSI 2016
ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.