2 Chronicles 30:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ಆ ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
Kannada BSI Bible 2016
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು.
Kannada Bible (KNCL) BSI 2016
ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.