2 Chronicles 30:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಂದವರೆಲ್ಲರೂ ಇನ್ನೂ ಏಳು ದಿವಸ ಅಲ್ಲಿಯೇ ಇರಲು ಒಪ್ಪಿಕೊಂಡರು. ಇನ್ನೂ ಏಳು ದಿವಸ ಪಸ್ಕಹಬ್ಬ ಆಚರಿಸಲು ಅವರು ಸಂತೋಷಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲದೆ ಸಮೂಹದವರು ಇನ್ನೂ ಏಳು ದಿನಗಳ ಕಾಲ ಹಬ್ಬವನ್ನು ಆ ಆಚರಿಸಬೇಕೆಂದು ತೀರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು
Kannada BSI Bible 2016
ಆದರೆ ಸಮೂಹವೆಲ್ಲಾ ಮತ್ತೂ ಏಳು ದಿವಸ ಆಚರಿಸುವದಕ್ಕೆ ಯೋಚಿಸಿಕೊಂಡ ಮೇಲೆ ಏಳು ದಿವಸಗಳು ಸಂತೋಷವಾಗಿ ಆಚರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಹಿಜ್ಕೀಯನು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಪ್ರಭುಗಳು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ತಮಗೆ ಯಜ್ಞಕ್ಕಾಗಿ ದಾನಮಾಡಿದ್ದರಿಂದಲೂ ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿದ್ದರಿಂದಲೂ
Kannada Bible (KNCL) BSI 2016
ಜುದೇಯದ ಅರಸ ಹಿಜ್ಕೀಯನು ಸಾವಿರ ಹೋರಿಗಳನ್ನು, ಏಳು ಸಾವಿರ ಕುರಿಗಳನ್ನು, ಪದಾಧಿಕಾರಿಗಳು ಸಾವಿರ ಹೋರಿಗಳನ್ನು ಹಾಗು ಹತ್ತು ಸಾವಿರ ಕುರಿಗಳನ್ನು ಜನರಿಗೆ ದಾನಮಾಡಿದರು; ಯಾಜಕರಲ್ಲಿ ಬಹುಮಂದಿ ತಮ್ಮನ್ನು ಶುದ್ಧಪಡಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.