2 Chronicles 30:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದದ ಜನರೆಲ್ಲರೂ ಲೇವಿಯರೂ ಇಸ್ರೇಲಿನಿಂದ ಬಂದ ಜನರೂ ಮತ್ತು ಇಸ್ರೇಲಿನಿಂದ ಬಂದು ಯೆಹೂದದಲ್ಲಿ ನೆಲೆಸಿದ್ದ ವಿದೇಶಿಯರೂ ಹಬ್ಬವನ್ನು ಆಚರಿಸಿ ಬಹಳವಾಗಿ ಸಂತೋಷಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ್ಯರ ಸರ್ವಸಮೂಹದವರೂ, ಯಾಜಕರು, ಲೇವಿಯರೂ, ಇಸ್ರಾಯೇಲ್ ಪ್ರಾಂತ್ಯಗಳಿಂದ ಸೇರಿಬಂದವರೆಲ್ಲರೂ ಹಾಗು ಇಸ್ರಾಯೇಲ್ ಯೆಹೂದ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗೊಂಡಿದ್ದರು.
Kannada BSI Bible 2016
ಯೆಹೂದದ ಸಭೆಯವರೆ ಲ್ಲರೂ ಯಾಜಕರೂ ಲೇವಿಯರೂ ಇಸ್ರಾಯೇಲಿನಿಂದ ಬಂದ ಸಮಸ್ತ ಸಭೆಯೂ ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.
Kannada Bible (KNCL) BSI 2016
ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.