2 Chronicles 30:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
Kannada BSI Bible 2016
ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅಪರಾಧ ಮಾಡಿದಂಥ, ನೀವು ನೋಡುವ ಹಾಗೆ ನಾಶನಕ್ಕೆ ಒಪ್ಪಿಸಲ್ಪಟ್ಟಂಥ, ನಿಮ್ಮ ಪಿತೃಗಳ ಹಾಗೆಯೂ ನಿಮ್ಮ ಸಹೋದರರ ಹಾಗೆಯೂ ಇರಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.
Kannada Bible (KNCL) BSI 2016
ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.