2 Chronicles 31:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.
Kannada BSI Bible 2016
ಚಾದೋಕನ ಮನೆಯವನಾಗಿರುವ ಪ್ರಧಾನ ಯಾಜಕನಾದ ಅಜರ್ಯನು ಅವನಿಗೆ -- ಕರ್ತನ ಮನೆಗೆ ಕಾಣಿಕೆಗಳನ್ನು ತರಲು ಆರಂಭಿಸಿದಂದಿನಿಂದ ನಿಮಗೆ ತಿನ್ನುವದಕ್ಕೆ ಸಂಪೂರ್ಣವಿತ್ತು; ಉಳಿದದ್ದು ಬಹಳವಾಯಿತು; ಯಾಕಂದರೆ ಕರ್ತನು ತನ್ನ ಜನ ರನ್ನು ಆಶೀರ್ವದಿಸಿದ್ದಾನೆ. ಆದದರಿಂದ ಉಳಿದದ್ದು ಈ ರಾಶಿಯಾಯಿತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.
Kannada Bible (KNCL) BSI 2016
ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.