2 Chronicles 31:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
Kannada BSI Bible 2016
ಇದಲ್ಲದೆ ಲೇವಿಯನಾಗಿರುವ ಇಮ್ನನ ಮಗನಾದ ಕೋರೆ ಎಂಬವನು ಪೂರ್ವದಿಕ್ಕಿ ನಲ್ಲಿರುವ ದ್ವಾರಪಾಲಕನು ಕರ್ತನ ಕಾಣಿಕೆಗಳನ್ನೂ ಮಹಾ ಪರಿಶುದ್ಧವಾದವುಗಳನ್ನೂ ಪಾಲು ಹಂಚುವ ದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಅರ್ಪಣೆ ಗಳ ಮೇಲೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
Kannada Bible (KNCL) BSI 2016
ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.