2 Chronicles 31:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.
Kannada BSI Bible 2016
ಅವರ ಸಮಸ್ತ ಕೂಟದಲ್ಲಿ ಲೆಕ್ಕದೊಳಗೆ ಬರೆ ಯಲ್ಪಟ್ಟ ಅವರ ಚಿಕ್ಕವರಿಗೂ ಹೆಂಡತಿಯರಿಗೂ ಕುಮಾರರಿಗೂ ಕುಮಾರ್ತೆಯರಿಗೂ ಕೊಡುವದಕ್ಕೆ ಇದ್ದರು. ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನು ಪರಿಶುದ್ಧತೆಯಲ್ಲಿ ಪರಿಶುದ್ಧ ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)
Kannada Bible (KNCL) BSI 2016
ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.