2 Chronicles 31:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.
Kannada BSI Bible 2016
ಇದ ಲ್ಲದೆ ಯಾಜಕರಲ್ಲಿರುವ ಸಮಸ್ತ ಗಂಡಸರಿಗೂ ಲೇವಿ ಯರಲ್ಲಿ ಬರೆಯಲ್ಪಟ್ಟಿದ್ದ ಸಮಸ್ತರಿಗೂ ಪಾಲನ್ನು ಕೊಡುವದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ಮಕ್ಕಳಲ್ಲಿ ಹೆಸರಿನಿಂದ ಬರೆಯಲ್ಪಟ್ಟ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆರೋನನ ಸಂತಾನದವರಾದ ಯಾಜಕರ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವದಕ್ಕೆ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಪುರುಷರಿದ್ದರು.
Kannada Bible (KNCL) BSI 2016
ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.