2 Chronicles 31:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು.
Kannada BSI Bible 2016
ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜ ಕರ ಲೇವಿಯರ ಸರತಿಗಳನ್ನು ನೇಮಿಸಿದನು. ದಹನ ಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಅರ್ಪಿ ಸುವದಕ್ಕೂ ಸೇವಿಸುವದಕ್ಕೂ ಕರ್ತನ ಗುಡಾರಗಳ ಬಾಗಲುಗಳಲ್ಲಿ ಸ್ತೋತ್ರ ಮಾಡುವದಕ್ಕೂ ಕೊಂಡಾ ಡುವದಕ್ಕೂ ಯಾಜಕರನ್ನೂ ಲೇವಿಯರನ್ನೂ ನೇಮಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.
Kannada Bible (KNCL) BSI 2016
ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.