2 Chronicles 31:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.
Kannada BSI Bible 2016
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.
Kannada Bible (KNCL) BSI 2016
ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.