2 Chronicles 31:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇಶದ ಜನರು ಯಾಜಕರಿಗೂ ಲೇವಿಯರಿಗೂ ತಮ್ಮ ಬೆಳೆಯ ಒಂದು ಪಾಲನ್ನು ಕೊಡಬೇಕಾಗಿತ್ತು. ಹಿಜ್ಕೀಯನು ಯಾಜಕರಿಗೂ ಲೇವಿಯರಿಗೂ ಅವರು ಕೊಡಬೇಕಾಗಿದ್ದ ಪಾಲನ್ನು ಕೊಡಬೇಕೆಂದು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರಿಗೆ ಆಜ್ಞಾಪಿಸಿದನು. ಹೀಗಿರುವಾಗ ಯಾಜಕರೂ ಲೇವಿಯರೂ ತಮ್ಮ ಸಮಯವನ್ನೆಲ್ಲಾ ದೇವರ ಸೇವೆಯಲ್ಲಿ ಕಳೆಯಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
Kannada BSI Bible 2016
ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
Kannada Bible (KNCL) BSI 2016
ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.