2 Chronicles 32:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕದ ಜನರು ಆರಾಧಿಸಿದ ಮತ್ತು ಕೈಯಾರೆ ಮಾಡಿದ್ದ ದೇವರುಗಳನ್ನು ಜೆರುಸಲೇಮಿನ ದೇವರೊಂದಿಗೆ ಹೋಲಿಸಿ ಆತನ ವಿರುದ್ಧವಾಗಿ ಮಾತಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
Kannada BSI Bible 2016
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.
Kannada Bible (KNCL) BSI 2016
ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.