2 Chronicles 32:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಅಶ್ಶೂರದ ಅರಸನ ಪಾಳೆಯಕ್ಕೆ ದೇವದೂತನನ್ನು ಕಳುಹಿಸಿದನು. ಆ ದೂತನು ಅಶ್ಶೂರದ ಎಲ್ಲಾ ಸೈನ್ಯದವರನ್ನೂ ಅವರ ಅಧಿಕಾರಿಗಳನ್ನೂ ಸಂಹರಿಸಿದನು. ಆಗ ಅಶ್ಶೂರದ ಅರಸನು ತನ್ನ ಸ್ವಂತ ದೇಶಕ್ಕೆ ಹಿಂತಿರುಗಿದನು. ಅವನ ಜನರು ಅವನ ವಿಷಯದಲ್ಲಿ ನಾಚಿಕೆಪಟ್ಟರು. ಅವನು ತನ್ನ ದೇವರಮಂದಿರದೊಳಕ್ಕೆ ಹೋದಾಗ ಅವನ ಸ್ವಂತ ಮಕ್ಕಳಲ್ಲಿ ಕೆಲವರು ಅವನನ್ನು ಖಡ್ಗದಿಂದ ಸಂಹರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
Kannada BSI Bible 2016
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.
Kannada Bible (KNCL) BSI 2016
ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.