2 Chronicles 32:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಷ್ಟೋ ಜನರು ಜೆರುಸಲೇಮಿನಲ್ಲಿನ ದೇವರಾದ ಯೆಹೋವನಿಗೆ ಕಾಣಿಕೆಗಳನ್ನು ತಂದರು. ಹಾಗೆಯೇ ಅರಸನಾದ ಹಿಜ್ಕೀಯನಿಗೂ ಬೆಲೆಬಾಳುವ ವಸ್ತುಗಳನ್ನು ತಂದರು. ಅಂದಿನಿಂದ ಬೇರೆ ದೇಶದವರು ಹಿಜ್ಕೀಯನನ್ನು ಗೌರವಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
Kannada BSI Bible 2016
ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಲು ದೊಡ್ಡವನೆಂದು ಎಣಿಸುತ್ತಿದ್ದರು.
Kannada Bible (KNCL) BSI 2016
ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.