2 Chronicles 32:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
Kannada BSI Bible 2016
ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಆತನು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
Kannada Bible (KNCL) BSI 2016
ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.