2 Chronicles 32:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹಿಜ್ಕೀಯನಿಗೆ ಬೇಕಾದಷ್ಟು ಧನೈಶ್ವರ್ಯಗಳಿದ್ದವು. ಅವನು ಬೆಳ್ಳಿಬಂಗಾರಗಳನ್ನೂ ಸುಗಂಧವಸ್ತುಗಳನ್ನೂ ಗುರಾಣಿಗಳನ್ನೂ ಬೆಲೆಬಾಳುವ ಆಭರಣಗಳನ್ನೂ ಇಡಲು ಸ್ಥಳವನ್ನು ಏರ್ಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
Kannada BSI Bible 2016
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿ ಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧ ಇವುಗಳನ್ನಿಡುವದಕ್ಕೋಸ್ಕರ ಭಂಡಾರಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳನ್ನು ಸಂಗ್ರಹಿಸುವದಕ್ಕೋಸ್ಕರ ಉಗ್ರಾಣಗಳನ್ನೂ
Kannada Bible (KNCL) BSI 2016
ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.