2 Chronicles 32:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
Kannada BSI Bible 2016
ಅವನು ಪಟ್ಟಣದ ಹೊರಗಿರುವ ನೀರು ಬುಗ್ಗೆಗ ಳನ್ನು ಮುಚ್ಚಿಸುವದಕ್ಕೆ ತನ್ನ ಪ್ರಧಾನರ ಸಂಗಡಲೂ ತನ್ನ ಪರಾಕ್ರಮಶಾಲಿಗಳ ಸಂಗಡಲೂ ಯೋಚಿಸಿ ಕೊಂಡನು. ಅವರು ಅವನಿಗೆ ಸಹಾಯಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನಿಟ್ಟು ಅವರ ಸಹಾಯವನ್ನು ಪಡಕೊಂಡನು.
Kannada Bible (KNCL) BSI 2016
ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.