2 Chronicles 32:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
Kannada BSI Bible 2016
ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
Kannada Bible (KNCL) BSI 2016
ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.