2 Chronicles 32:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕ ಜನರು ಒಟ್ಟಾಗಿ ಬಂದು ದೇಶದ ಮಧ್ಯದಲ್ಲಿ ಹರಿಯುವ ಹಳ್ಳಗಳನ್ನೂ ತೊರೆಗಳನ್ನೂ ಬುಗ್ಗೆಗಳನ್ನೂ ನಿಲ್ಲಿಸಿದರು. ಅಶ್ಶೂರದ ಅರಸನು ಬಂದಾಗ ಅವನಿಗೆ ನೀರು ಸಿಗದಂತೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
Kannada BSI Bible 2016
ಆದದರಿಂದ ಅನೇಕ ಜನರು ಕೂಡಿಕೊಂಡು ನೀರು ಬುಗ್ಗೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹಳ್ಳ ವನ್ನೂ ಮುಚ್ಚಿಬಿಟ್ಟು--ಅಶ್ಶೂರಿನ ಅರಸುಗಳು ಬಂದು ಬಹಳ ನೀರು ದೊರಕಿಸಿಕೊಳ್ಳುವದು ಯಾಕೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.
Kannada Bible (KNCL) BSI 2016
ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.