2 Chronicles 32:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಜ್ಕೀಯನು ಸೈನಿಕರಿಗೆಲ್ಲಾ ದಳಪತಿಗಳನ್ನು ನೇಮಿಸಿದನು. ಜೆರುಸಲೇಮಿನ ನಗರದ ಹೆಬ್ಬಾಗಿಲ ಬಳಿಯಲ್ಲಿದ್ದ ಮೈದಾನದಲ್ಲಿ ಹಿಜ್ಕೀಯನು ಸೇನಾಪತಿಗಳೊಂದಿಗೆ ಸಮಾಲೋಚನೆ ನಡಿಸಿದನು; ಅವರನ್ನು ಪ್ರೋತ್ಸಾಹಿಸಿ ಹುರಿದುಂಬಿಸಿದನು. “ಧೈರ್ಯಶಾಲಿಗಳಾಗಿರಿ, ಬಲಗೊಳ್ಳಿರಿ, ಅಶ್ಶೂರದ ಅರಸನಿಗಾಗಲಿ ಅರಸನೊಂದಿಗಿರುವ ಆ ದೊಡ್ಡ ಸೈನ್ಯಕ್ಕಾಗಲಿ ಭಯಪಡಬೇಡಿರಿ. ಅವನಿಗಿಂತಲೂ ಹೆಚ್ಚಾದ ಸಾಮರ್ಥ್ಯ ನಮಗಿದೆ. (Verses 6-7)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
Kannada BSI Bible 2016
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿ ಗಳನ್ನು ಇರಿಸಿ ಪಟ್ಟಣದ ಬಾಗಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು ಸಮಾಧಾನವಾಗಿ ಅವರ ಸಂಗಡ ಮಾತನಾಡಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇವಿುಸಿ ಅವರನ್ನು ಊರುಬಾಗಲಿನ ಬೈಲಿನಲ್ಲಿ ಕೂಡಿಸಿಕೊಂಡು ಅವರಿಗೆ -
Kannada Bible (KNCL) BSI 2016
ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು: