2 Chronicles 32:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸಮಸ್ತ ಸೈನ್ಯದೊಡನೆ ಲಾಕೀಷ್ ಪಟ್ಟಣದ ಸಮೀಪದಲ್ಲಿ ಪಾಳೆಯ ಮಾಡಿಕೊಂಡಿದ್ದನು. ಅಲ್ಲಿ ತನ್ನ ಸೇವಕರನ್ನು ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ ಮತ್ತು ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದದ ಜನರ ಬಳಿಗೂ ಸಂದೇಶದೊಡನೆ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
Kannada BSI Bible 2016
ಇದರ ತರುವಾಯ ಅಶ್ಶೂರಿನ ಅರಸನಾದ ಸನ್ಹೇ ರೀಬನೂ ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ ಅವನು ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಹಿಜ್ಕೀ ಯನ ಬಳಿಗೂ ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳು ಹಿಸಿ--ಅಶ್ಶೂರಿನ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದ ಮೇಲೆ ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇವಿುಗೆ ಕಳುಹಿಸಿ ಅವರಿಂದ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇವಿುನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ -
Kannada Bible (KNCL) BSI 2016
ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡು ಇದ್ದ ಅಸ್ಸೀರಿಯದ ಅರಸ ಸನ್ಹೇರೀಬನು ತನ್ನ ಮುಖಾಂತರ ಜುದೇಯದ ಅರಸ ಹಿಜ್ಕೀಯನಿಗೂ ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆಂದು ಹೇಳಿಸಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.