2 Chronicles 33:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.
Kannada BSI Bible 2016
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.
Kannada Bible (KNCL) BSI 2016
ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.