2 Chronicles 33:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಉನ್ನತಸ್ಥಳಗಳಲ್ಲಿ ಯಜ್ಞವನ್ನು ಮಾಡುತ್ತಿದ್ದರೂ ಅದನ್ನು ಯೆಹೋವನಿಗೋಸ್ಕರವೇ ಮಾಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನೂ ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
Kannada BSI Bible 2016
ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
Kannada Bible (KNCL) BSI 2016
ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.