2 Chronicles 33:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮನಸ್ಸೆಯು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ಅವನ ಸ್ವಂತ ಅರಮನೆಯಲ್ಲಿ ಸಮಾಧಿಮಾಡಿದರು. ಮನಸ್ಸೆಯ ಮಗನಾದ ಅಮೋನನು ಅವನ ಬದಲಿಗೆ ಅರಸನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಆಮೋನನು ಅರಸನಾದನು.
Kannada BSI Bible 2016
ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.
Kannada Bible (KNCL) BSI 2016
ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.