2 Chronicles 33:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಮನಸ್ಸೆಯು ಯೆಹೋವನಿಗೆ ಇಷ್ಟವಾದುದ್ದನ್ನು ಮಾಡಿದಂತೆ ಅವನು ಮಾಡಲಿಲ್ಲ. ಅವನ ತಂದೆಯಾದ ಮನಸ್ಸೆಯು ಮಾಡಿದ ಎರಕದ ಬೊಂಬೆಗಳಿಗೂ ಕೆತ್ತನೆ ಕೆಲಸದ ವಿಗ್ರಹಗಳಿಗೂ ಅಡ್ಡಬಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೋನನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
Kannada BSI Bible 2016
ಆದರೆ ಅವನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಮೋನನು ತನ್ನ ತಂದೆಯಾದ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನರ್ಪಿಸಿ ಅವುಗಳನ್ನು ಸೇವಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ತಂದೆಯಾದ ಮನಸ್ಸೆಯ ಹಾಗೆಯೇ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆಯಾದ ಮನಸ್ಸೆಯು ಮಾಡಿಸಿದ್ದ ಎಲ್ಲಾ ವಿಗ್ರಹಗಳಿಗೆ ಯಜ್ಞವನ್ನರ್ಪಿಸಿ ಅವುಗಳನ್ನು ಪೂಜಿಸಿದನು.
Kannada Bible (KNCL) BSI 2016
ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.