2 Chronicles 33:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯ ತಂದೆಯಾದ ಹಿಜ್ಕೀಯನು ಕೆಡವಿದ ಉನ್ನತಸ್ಥಳಗಳನ್ನು ಅವನು ಮತ್ತೆ ಕಟ್ಟಿಸಿದನು. ಬಾಳ್ ದೇವರ ವೇದಿಕೆಯನ್ನು ಕಟ್ಟಿಸಿ ಅಶೇರಸ್ತಂಭಗಳನ್ನು ನಿಲ್ಲಿಸಿದನು. ಆಕಾಶದ ನಕ್ಷತ್ರಸಮೂಹಗಳನ್ನು ಪೂಜಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರುಗಿ ಸ್ಥಾಪಿಸಿ, ಬಾಳ್ ದೇವತೆಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
Kannada BSI Bible 2016
ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಳಗಳನ್ನು ತಿರಿಗಿ ಸ್ಥಾಪಿಸಿ ಬಾಳ್‍ದೇವತೆಗಳಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರವಿಗ್ರಹ ಸ್ತಂಭಗಳನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
Kannada Bible (KNCL) BSI 2016
ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.