2 Chronicles 33:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
Kannada BSI Bible 2016
ಬೆನ್ ಹಿನ್ನೋಮ್ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
Kannada Bible (KNCL) BSI 2016
ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.