2 Chronicles 33:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನಸ್ಸೆಯು ಯೆಹೂದದ ಜನರನ್ನೂ ಜೆರುಸಲೇಮಿನಲ್ಲಿದ್ದ ಜನರನ್ನೂ ಕೆಟ್ಟಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದನು. ಇಸ್ರೇಲರು ಬರುವದಕ್ಕಿಂತ ಮೊದಲು ಆ ದೇಶದಲ್ಲಿದ್ದ ಜನರಿಗಿಂತಲೂ ಅತ್ಯಂತ ಕೆಟ್ಟವನಾಗಿ ವರ್ತಿಸಿದನು. ಆ ದೇಶದಲ್ಲಿದ್ದ ಜನರನ್ನು ಯೆಹೋವನು ನಾಶಮಾಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
Kannada BSI Bible 2016
ಹೀಗೆಯೇ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ನಾಶ ಮಾಡಿದ ಜನಾಂಗಗಳಿಗಿಂತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಕೆಟ್ಟದ್ದನ್ನು ಮಾಡು ವದಕ್ಕೆ ತಪ್ಪಿಹೋಗುವಂತೆ ಮನಸ್ಸೆಯು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
Kannada Bible (KNCL) BSI 2016
ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.