2 Chronicles 34:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ ಯೆಹೋವನ ಧರ್ಮಶಾಸ್ತ್ರವು ಸಿಕ್ಕಿತು” ಎಂದು ಹೇಳಿ ಅದನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು.
Kannada BSI Bible 2016
ಆಗ ಹಿಲ್ಕೀಯನು ಪ್ರತ್ಯುತ್ತರ ಕೊಟ್ಟು ರಾಯಸದ ವನಾದ ಶಾಫಾನನಿಗೆ--ಕರ್ತನ ಆಲಯದಲ್ಲಿ ನ್ಯಾಯ ಪ್ರಮಾಣದ ಪುಸ್ತಕವು ನನಗೆ ಸಿಕ್ಕಿತು ಎಂದು ಹೇಳಿ ದನು. ಮತ್ತು ಹಿಲ್ಕೀಯನು ಆ ಪುಸ್ತಕವನ್ನು ಶಾಫಾನ ನಿಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಲ್ಕೀಯನು ಲೇಖಕನಾದ ಶಾಫಾನನಿಗೆ - ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ ಎಂದು ಹೇಳಿ ಅದನ್ನು ಅವನ ಕೈಯಲ್ಲಿಕೊಟ್ಟನು.
Kannada Bible (KNCL) BSI 2016
ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.