2 Chronicles 34:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕೆಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
Kannada BSI Bible 2016
ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.