2 Chronicles 34:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, ‘ನಾನು ಈ ಸ್ಥಳಕ್ಕೂ ಇಲ್ಲಿ ವಾಸಿಸುವವರಿಗೂ ಸಂಕಟವನ್ನು ಬರಮಾಡುವೆನು. ಯೆಹೂದದೇಶದ ಅರಸನ ಮುಂದೆ ಓದಿದಂಥ ಪುಸ್ತಕದಲ್ಲಿ ಬರೆಯಿಸಿದ ಎಲ್ಲಾ ಶಾಪಗಳನ್ನು ನಾನು ಬರಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
Kannada BSI Bible 2016
ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು - ಈ ದೇಶದ ಮೇಲೆಯೂ ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;
Kannada Bible (KNCL) BSI 2016
‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.