2 Chronicles 34:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೆಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನನ್ನು ಬಿಟ್ಟು ಅನ್ಯ ದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ಈ ದೇಶದ ಮೇಲೆ ಉರಿಯುತ್ತಿರುವ ನನ್ನ ಕೋಪಾಗ್ನಿಯು ಆರಿಹೋಗುವುದಿಲ್ಲ” ಎನ್ನುತ್ತಾನೆ.
Kannada BSI Bible 2016
ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯುತ್ತಿರುವದು, ಆರಿಹೋಗುವದಿಲ್ಲ ಅನ್ನುತ್ತಾನೆ.
Kannada Bible (KNCL) BSI 2016
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’