2 Chronicles 34:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಯೆಹೋವನನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಾದ ಯೋಷೀಯನಿಗೆ ಹೀಗೆ ಹೇಳಿರಿ: ‘ನೀನು ಸ್ವಲ್ಪಕಾಲದ ಹಿಂದೆ ಕೇಳಿದ ವಿಷಯಗಳ ಬಗ್ಗೆ ಇಸ್ರೇಲಿನ ಯೆಹೋವನು ಹೇಳುವುದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಾನು ಕೇಳಿದ ವಾಕ್ಯಗಳ ವಿಷಯವಾಗಿ, ಇಸ್ರಾಯೇಲ್ ದೇವರಾದ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ,
Kannada BSI Bible 2016
ಆದರೆ ಕರ್ತನಿಂದ ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ--ನೀನು ಕೇಳಿದ ಮಾತುಗ ಳನ್ನು ಕುರಿತು ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಮಾತೇನಂದರೆ - ಇಸ್ರಾಯೇಲ್‍ದೇವರಾದ ಯೆಹೋವನು ಇಂತೆನ್ನುತ್ತಾನೆ,
Kannada Bible (KNCL) BSI 2016
ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,