2 Chronicles 34:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.
Kannada BSI Bible 2016
ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
Kannada Bible (KNCL) BSI 2016
ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.