2 Chronicles 34:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನೂ ಯೆಹೂದದಲ್ಲಿ ವಾಸಿಸುವ ಜನರೂ ಜೆರುಸಲೇಮಿನಲ್ಲಿ ವಾಸಿಸುವ ಜನರೂ ಯಾಜಕರೂ ಲೇವಿಯರೂ ದೊಡ್ಡವರು ಸಣ್ಣವರು ಎಂಬ ವ್ಯತ್ಯಾಸವಿಲ್ಲದೆ ತಮ್ಮ ಅರಸನೊಂದಿಗೆ ಇದ್ದರು. ಯೋಷೀಯನು ಧರ್ಮಶಾಸ್ತ್ರವನ್ನು ಜನರಿಗೆ ಓದಿ ತಿಳಿಸಿದನು. ಆ ಪುಸ್ತಕವು ದೇವಾಲಯದಲ್ಲಿ ಸಿಕ್ಕಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಯೆರೂಸಲೇಮಿನವರನ್ನೂ, ಬೇರೆ ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಲೇವಿಯರನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.
Kannada BSI Bible 2016
ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಲೇವಿಯರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು. ದೊಡ್ಡವರು ಮೊದಲುಗೊಂಡು ಚಿಕ್ಕವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ
Kannada Bible (KNCL) BSI 2016
ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.