2 Chronicles 34:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ತನ್ನ ಸ್ಥಳದಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು.
Kannada BSI Bible 2016
ಅರಸನು ತನ್ನ ಸ್ಥಳದಲ್ಲಿ ನಿಂತುಕೊಂಡು ಕರ್ತನನ್ನು ಹಿಂಬಾಲಿಸುವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನೂ ತನ್ನ ಪೂರ್ಣಹೃದಯದಿಂದಲೂ ತನ್ನ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳ ಹಾಗೆ ಮಾಡುವದಕ್ಕೂ ಕರ್ತನ ಮುಂದೆ ಒಡಂಬಡಿಕೆ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.
Kannada Bible (KNCL) BSI 2016
ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.