2 Chronicles 34:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಎಲ್ಲಾ ಜೆರುಸಲೇಮಿನವರಿಂದಲೂ ಮತ್ತು ಬೆನ್ಯಾಮೀನ್ಯರಿಂದಲೂ ಪ್ರಮಾಣ ಮಾಡಿಸಿದನು. ತಮ್ಮ ಪೂರ್ವಿಕರು ವಿಧೇಯರಾಗಿದ್ದ ದೇವರಿಗೆ ತಾವೂ ವಿಧೇಯರಾಗಿರುವುದಾಗಿ ಅವರು ಪ್ರಮಾಣ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಎಲ್ಲಾ ಯೆರೂಸಲೇಮಿನವರಿಂದಲೂ, ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇಮಿನವರು ಏಕದೇವರಾದ ತಮ್ಮ ಪೂರ್ವಿಕರ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
Kannada BSI Bible 2016
ಇದಲ್ಲದೆ ಅವನು ಯೆರೂಸಲೇಮಿ ನಲ್ಲಿಯೂ ಬೆನ್ಯಾವಿಾನಿನಲ್ಲಿಯೂ ಸಿಕ್ಕಿದವರೆಲ್ಲರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂ ಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.ಹೀಗೆಯೇ ಯೋಷೀಯನು ಇಸ್ರಾಯೇಲ್‌ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಎಲ್ಲಾ ಯೆರೂಸಲೇವಿುನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಯೆರೂಸಲೇವಿುನವರು ಏಕದೇವರಾದ ತಮ್ಮ ಪಿತೃಗಳ ದೇವರ ನಿಬಂಧನೆಯನ್ನು ಕೈಕೊಳ್ಳುವವರಾದರು.
Kannada Bible (KNCL) BSI 2016
ಅಂತೆಯೇ ಎಲ್ಲ ಜೆರುಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಜೆರುಸಲೇಮಿನವರು ಏಕದೇವರಾದ ತಮ್ಮ ಪೂರ್ವಜರ ದೇವರ ನಿಬಂಧನೆಯನ್ನು ಕೈಕೊಳ್ಳುವಂಥವರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.