2 Chronicles 34:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲ್ ಜನರ ಬಳಿ ನಾನಾ ಜನಾಂಗದವರ ವಿಗ್ರಹಗಳಿದ್ದವು. ಆದರೆ ಯೋಷೀಯನು ಆ ವಿಗ್ರಹಗಳನ್ನೆಲ್ಲಾ ನಾಶಮಾಡಿದನು. ಇಸ್ರೇಲರು ದೇವರಾದ ಯೆಹೋವನ ಸೇವೆಮಾಡುವಂತೆ ಯೋಷೀಯನು ಮಾಡಿದನು. ಯೋಷೀಯನು ಬದುಕಿದ್ದಷ್ಟು ಕಾಲ ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಸೇವೆಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಷೀಯನು ಇಸ್ರಾಯೇಲರಿಗೆ ಸೇರಿದ ಎಲ್ಲಾ ಪ್ರಾಂತ್ಯಗಳೊಳಗಿನ ಅಸಹ್ಯ ಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಾಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಆರಾಧಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
Kannada BSI Bible 2016
ಹೀಗೆಯೇ ಯೋಷೀಯನು ಇಸ್ರಾಯೇಲ್ ಮಕ್ಕಳಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದು ಹಾಕಿ ಇಸ್ರಾಯೇಲಿನಲ್ಲಿ ಉಳಿದಿರುವರೆಲ್ಲರೂ ತಮ್ಮ ದೇವರಾದ ಕರ್ತನನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವ ರಾದ ಕರ್ತನನ್ನು ಹಿಂಬಾಲಿಸುವದನ್ನು ಬಿಡದೆ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಷೀಯನು ಇಸ್ರಾಯೇಲ್ಯರಿಗೆ ಸೇರಿದ ಎಲ್ಲಾ ಪ್ರಾಂತಗಳೊಳಗಿನ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ ಇಸ್ರಾಯೇಲ್ಯರಲ್ಲಿ ಉಳಿದಿರುವವರು ತಮ್ಮ ದೇವರಾದ ಯೆಹೋವನನ್ನೇ ಸೇವಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಡದೆ ಹಿಂಬಾಲಿಸಿದರು.
Kannada Bible (KNCL) BSI 2016
ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.